TSK

TSK · ವಿಮೋಚನಕಾಂಡ 20:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.

¶ “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.

ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.

ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.

ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.

ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.

ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.

ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.

ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು.

ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.

ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.

ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.

‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.

ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.

ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”

ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.

ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;

ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.

“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”

ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.

ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.

‹ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.›

‹ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.›

ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.

ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.