TSK

TSK · ವಿಮೋಚನಕಾಂಡ 22:14

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.

ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.

ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.

‹ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.›