TSK

TSK · ವಿಮೋಚನಕಾಂಡ 22:21

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’

¶ “‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.

ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.

ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.

¶ ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.

ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.

ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,

ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’