¶ “‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
TSK
TSK · ವಿಮೋಚನಕಾಂಡ 22:25
مراجع Treasury of Scripture Knowledge في ಕನ್ನಡ IRV.
ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.
¶ ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.
‹ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,›