TSK

TSK · ವಿಮೋಚನಕಾಂಡ 23:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.

ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.

¶ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.

¶ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.

¶ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.

¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›