TSK

TSK · ವಿಮೋಚನಕಾಂಡ 23:31

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.

ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.

ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.

ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.

ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.

ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.

ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.

ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.

ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.

ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.

ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

¶ ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.

ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.