TSK

TSK · ವಿಮೋಚನಕಾಂಡ 24:1

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.

¶ ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.

ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.

¶ ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.

¶ ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.

¶ ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.

¶ ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.

ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.

¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.