TSK

TSK · ವಿಮೋಚನಕಾಂಡ 25:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

¶ ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.

ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.

¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.

ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.

ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.

ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.