TSK

TSK · ವಿಮೋಚನಕಾಂಡ 25:30

مراجع Treasury of Scripture Knowledge في ಕನ್ನಡ IRV.

العودة إلى المقطع

ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,

¶ “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.

ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.

ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.

ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,

ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.

¶ ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.