TSK

TSK · ವಿಮೋಚನಕಾಂಡ 25:37

مراجع Treasury of Scripture Knowledge في ಕನ್ನಡ IRV.

العودة إلى المقطع

ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.

¶ ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.

ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.

ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,

ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.

ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

‹ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.›

¶ ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.

“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.

¶ ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ

‹ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ›‹ದೂತರು, ಆ ಏಳು ದೀಪಸ್ತಂಭಗಳು ಅಂದರೆ›‹ಆ ಏಳು ಸಭೆಗಳು.” ›

ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.