ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
TSK
TSK · ವಿಮೋಚನಕಾಂಡ 27:2
مراجع Treasury of Scripture Knowledge في ಕನ್ನಡ IRV.
ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.
¶ ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.