TSK

TSK · ವಿಮೋಚನಕಾಂಡ 29:14

مراجع Treasury of Scripture Knowledge في ಕನ್ನಡ IRV.

العودة إلى المقطع

ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

¶ “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.

ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.

ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.

ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.

ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.

¶ ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.

ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.