TSK

TSK · ವಿಮೋಚನಕಾಂಡ 29:22

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,

ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.

ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,

ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.

ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.