TSK

TSK · ವಿಮೋಚನಕಾಂಡ 29:36

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.

ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.

¶ ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.

ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.

ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.