TSK

TSK · ವಿಮೋಚನಕಾಂಡ 29:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.

ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.

¶ ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

¶ “‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.

ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.