ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
TSK
TSK · ವಿಮೋಚನಕಾಂಡ 29:9
مراجع Treasury of Scripture Knowledge في ಕನ್ನಡ IRV.
ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.
ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
¶ ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.
ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
¶ ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?