TSK

TSK · ವಿಮೋಚನಕಾಂಡ 3:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.

ಆದ್ದರಿಂದ ಅವನು ಆ ದೂತನನ್ನು, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು” ಎಂದು ಕೇಳಿದನು.

ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.