¶ ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
TSK
TSK · ವಿಮೋಚನಕಾಂಡ 30:7
مراجع Treasury of Scripture Knowledge في ಕನ್ನಡ IRV.
ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.
ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ.
ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.
ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.