TSK

TSK · ವಿಮೋಚನಕಾಂಡ 31:13

مراجع Treasury of Scripture Knowledge في ಕನ್ನಡ IRV.

العودة إلى المقطع

ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”

¶ “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.

ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.

ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.

ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.

ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

‹ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.›

¶ ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,