¶ ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
TSK
TSK · ವಿಮೋಚನಕಾಂಡ 32:16
مراجع Treasury of Scripture Knowledge في ಕನ್ನಡ IRV.
ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
¶ ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.