TSK

TSK · ವಿಮೋಚನಕಾಂಡ 33:11

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.

¶ ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.

ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.

ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.

¶ ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.

ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.

ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.

‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›