ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
TSK
TSK · ವಿಮೋಚನಕಾಂಡ 33:12
مراجع Treasury of Scripture Knowledge في ಕನ್ನಡ IRV.
ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.
¶ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.