ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು.
TSK
TSK · ವಿಮೋಚನಕಾಂಡ 33:9
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.
¶ ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.
ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
¶ ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.