TSK

TSK · ವಿಮೋಚನಕಾಂಡ 5:22

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?

ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.

ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.

ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.

ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.