TSK

TSK · ವಿಮೋಚನಕಾಂಡ 6:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.

¶ ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.

ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ಯೇಸು, ‹“ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;›‹ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ”› ಎಂದನು.