TSK

TSK · ವಿಮೋಚನಕಾಂಡ 6:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,

ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.

ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.

ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.

ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?

ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.

ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,

ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.

ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು.