TSK

TSK · ವಿಮೋಚನಕಾಂಡ 7:10

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.

ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.

ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.

‹ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.›