TSK

TSK · ವಿಮೋಚನಕಾಂಡ 7:14

مراجع Treasury of Scripture Knowledge في ಕನ್ನಡ IRV.

العودة إلى المقطع

ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.

ಕಪ್ಪೆಗಳು ನಿನ್ನನ್ನೂ, ನಿನ್ನ ಮನೆಗಳನ್ನೂ, ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು, ನೈಲ್ ನದಿಯಲ್ಲಿ ಮಾತ್ರ ಇರುವವು” ಎಂದನು.

ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.

ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.

ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.

ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.

ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.

ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.