TSK

TSK · ವಿಮೋಚನಕಾಂಡ 7:20

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.

ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.

ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.

“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.

ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.

¶ ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.