ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.
TSK
TSK · ವಿಮೋಚನಕಾಂಡ 8:22
مراجع Treasury of Scripture Knowledge في ಕನ್ನಡ IRV.
ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.
ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.
ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.
ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.
ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.