ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
TSK
TSK · ವಿಮೋಚನಕಾಂಡ 9:27
مراجع Treasury of Scripture Knowledge في ಕನ್ನಡ IRV.
ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು.
ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.
¶ ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.