¶ “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
TSK
TSK · ಯೆಹೆಜ್ಕೇಲನು 21:14
مراجع Treasury of Scripture Knowledge في ಕನ್ನಡ IRV.
¶ ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.
ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.
ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”
¶ ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.
‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.
ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.