TSK

TSK · ಯೆಹೆಜ್ಕೇಲನು 21:2

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.

“ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.

“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,

“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,

“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು.

“ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,

ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.

ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.