ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
TSK
TSK · ಯೆಹೆಜ್ಕೇಲನು 21:24
مراجع Treasury of Scripture Knowledge في ಕನ್ನಡ IRV.
ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.
“ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’
ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.
ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.
ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.