TSK

TSK · ಯೆಹೆಜ್ಕೇಲನು 21:26

مراجع Treasury of Scripture Knowledge في ಕನ್ನಡ IRV.

العودة إلى المقطع

ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

¶ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.

ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.

¶ ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.

ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!

ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.

ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.