TSK

TSK · ಯೆಹೆಜ್ಕೇಲನು 39:4

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.

ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.

ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.