TSK

TSK · ಎಜ್ರನು 3:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

¶ ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.

ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.

ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.

¶ ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,

ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:

¶ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.

ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ.

¶ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

¶ ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.

ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,

ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;