TSK

TSK · ಎಜ್ರನು 4:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.

¶ ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.

¶ “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’

ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,