¶ ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
TSK
TSK · ಎಜ್ರನು 4:7
مراجع Treasury of Scripture Knowledge في ಕನ್ನಡ IRV.
¶ ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
¶ ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.
¶ ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
¶ ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.