TSK

TSK · ಎಜ್ರನು 6:3

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.

ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ.

ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!

¶ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,

¶ ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.

ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು.

ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.

ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.