TSK

TSK · ಎಜ್ರನು 8:21

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.

ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.

¶ ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.

ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.

¶ ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.

ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.

ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.

ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.

ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.

ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.

ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.

ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.