ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
TSK
TSK · ಎಜ್ರನು 9:3
مراجع Treasury of Scripture Knowledge في ಕನ್ನಡ IRV.
ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,
ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.
¶ ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.