TSK

TSK · ಗಲಾತ್ಯದವರಿಗೆ 3:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ‹“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.›

ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?

ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.

ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.

ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.