¶ ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
TSK
TSK · ಆದಿಕಾಂಡ 1:27
مراجع Treasury of Scripture Knowledge في ಕನ್ನಡ IRV.
¶ ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
ಆತನು ಪ್ರತ್ಯುತ್ತರವಾಗಿ, ‹“ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,›
ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.