TSK

TSK · ಆದಿಕಾಂಡ 10:14

مراجع Treasury of Scripture Knowledge في ಕನ್ನಡ IRV.

العودة إلى المقطع

ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.