TSK

TSK · ಆದಿಕಾಂಡ 12:3

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.

ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.

ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.

ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.

ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

‹ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.

¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.

ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.