TSK

TSK · ಆದಿಕಾಂಡ 12:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.

¶ ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.

¶ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.

¶ ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.

¶ ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.