TSK

TSK · ಆದಿಕಾಂಡ 14:23

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.

¶ ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.

ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.