TSK

TSK · ಆದಿಕಾಂಡ 14:7

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.

¶ ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.

¶ ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.

ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.

¶ ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.

¶ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.

ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.

¶ ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.

ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.