ಆದಿಕಾಂಡ 11:30
TSK
ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
TSK
مراجع Treasury of Scripture Knowledge في ಕನ್ನಡ IRV.
ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
¶ ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
¶ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.
ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.